ಕುಮಾರಸ್ವಾಮಿ ಅವರು ಬಹಳ ದೊಡ್ಡವರು. ಅವರು ಯಾರ ಬೆಂಬಲವನ್ನೂ ಪಡೆಯುವುದಿಲ್ಲ. ಒಕ್ಕಲಿಗರ ಮಠ, ಒಕ್ಕಲಿಗರ ಸಂಘ, ಒಕ್ಕಲಿಗ ಜಾತಿಯನ್ನು ಎಂದೂ ಉಪಯೋಗಿಸಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಛೇಡಿಸಿದ್ದಾರೆ. ಭಾನುವಾರ ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ನಿಮ್ಮ ಪರವಾಗಿ ಸ್ವಾಮೀಜಿಗಳು ಧ್ವನಿ ಎತ್ತಿರುವುದಕ್ಕೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರಲ್ಲ ಎಂಬ ಪ್ರಶ್ನೆಗೆ, ಹೌದಾ.. ಪಾಪ, ಕುಮಾರಣ್ಣನಿಗೆ ಒಕ್ಕಲಿಗರ ಎರಡನೇ ಮಠ ಹೇಗಾಯ್ತು ಎಂಬುದು ಗೊತ್ತಿಲ್ಲವೇ? ಎಂದಿದ್ದಾರೆ.