ಕಟ್ಟಡ ಕಾರ್ಮಿಕರು ದೇಶದ ಆರ್ಥಿಕಾಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದ್ದರೂ, ಅವರಿಗೆ ಸರಿಯಾದ ಸಮಯದಲ್ಲಿ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ ಎಸ್. ನಾಡಿಗೇರ ಅವರು ಸೋಮವಾರ 2 ಗಂಟೆಗೆ ಕಲಬುರಗಿಯಲ್ಲಿ ಮಾತನಾಡಿ ವಿಷಾದ ವ್ಯಕ್ತಪಡಿಸಿದರು.. ಕಾರ್ಮಿಕ ಇಲಾಖೆಯ ಆನ್ಲೈನ್ ತಂತ್ರಾಂಶದಲ್ಲಿ ತಾಂತ್ರಿಕ ತೊಂದರೆಗಳು ಇರುವುದರಿಂದ ಅನೇಕ ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪುತ್ತಿಲ್ಲ. ತಂತ್ರಾಂಶವನ್ನು ಶೀಘ್ರ ಸರಿಪಡಿಸಿ ಫಲಾನುಭವಿಗಳ ಮಕ್ಕಳಿಗೆ ಶೈಕ್ಷಣಿಕ ಸಹಾಯಧನವನ್ನು ನೀಡುವಂತೆ ಸರ್ಕಾರವನ್ನು ಆಗ್ರಹಿಸಿದರು.