ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಗಂಡು ಚಿರತೆಯೊಂದು ಬಿದ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಮದ್ದಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಮದ್ದಯ್ಯನಹುಂಡಿ ಗ್ರಾಮದಲ್ಲಿ ಹುಲಿ, ಚಿರತೆ ಉಪಟಳ ಹೆಚ್ಚಳವಾಗಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದು ಹಾಕುತ್ತಿದ್ದವು. ಇದರಿಂದ ಬೇಸತ್ತಿದ್ದ ರೈತರು ಬೋನ್ ಇರಿಸಿ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರು. ರೈತರ ಆಗ್ರಹದ ಹಿನ್ನಲೆ ಶಾಂತರಾಜಪ್ಪ ಎಂಬುವರ ಜಮೀನಿನಲ್ಲಿ ಅರಣ್ಯ ಇಲಾಖೆ ತುಮಕೂರು ಮಾದರಿಯ ಬೋನ್ ಇರಿಸಿ, ಕ್ಯಾಮಾರಾ ಅಳವಡಿಕೆ ಮಾಡಿದ್ದರು. ಸೋಮವಾರ ರಾತ್ರಿ ಬೋನಿಗೆ ಸುಮಾರು 2-3 ವರ್ಷದ ಗಂಡು ಚಿರತೆ ಬಿದ್ದಿದೆ.