ಕೊಳ್ಳೇಗಾಲ: ಪಟ್ಟಣದಲ್ಲಿ ಮತಗಳ್ಳತನ ವಿರೋಧಿಸಿ ಸಹಿ ಸಂಗ್ರಹ ಅಭಿಯಾನಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಚಾಲನೆ
ಕೊಳ್ಳೇಗಾಲದ ಪ್ರವಾಸಿ ಮಂದಿರ ಮುಂಭಾಗ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತಗಳ್ಳತನ ವಿರೋಧಿಸಿ ರಾಹುಲ್ ಗಾಂಧಿ ನಡೆಸುತ್ತಿರುವ ಜನಜಾಗೃತಿ ಹೋರಾಟ ಬೆಂಬಲವಾಗಿ ‘ವೋಟ್ ಚೋರಿ’ ಸಹಿ ಸಂಗ್ರಹ ಅಭಿಯಾನಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಮಂಗಳವಾರ ಚಾಲನೆ ನೀಡಿದರು. ಸಹಿ ಸಂಗ್ರಹ ಕಾರ್ಯಕ್ರಮಕ್ಕೆ ಎ.ಆರ್.ಕೃಷ್ಣಮೂರ್ತಿ ಸಹಿ ಹಾಕುವ ಮೂಲಕ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ನಡೆಸುತ್ತಿರುವ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಹೊಸ ಹೆಸರು ಸೇರ್ಪಡೆ ಮತ್ತು ತೆಗೆಯುವ ಕುರಿತು ಹೆಚ್ಚಿನ ನಿಗಾ ವಹಿಸಬೇಕು. ಇದು ಕೇವಲ ಪಟ್ಟಣ ಪ್ರದೇಶಕ್ಕೆ ಮಾತ್ರ ಸೀಮಿತವಲ್ಲ ಎಂದರು.