ಶಿಡ್ಲಘಟ್ಟ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ ರಕ್ತದಾನ ಶಿಬಿರ ಹಾಗೂ ಹಲವು ಕಾರ್ಯಕ್ರಮಗಳು
ಚಿಕ್ಕಬಳ್ಳಾಪುರ.. ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಬುಧವಾರ ಜಿಲ್ಲಾ ಬಿಜೆಪಿ ವತಿಯಿಂದ ವಿವಿಧ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಇದರ ಅಂಗವಾಗಿ ಶಿಡ್ಲಘಟ್ಟ ಬಿಜೆಪಿ ಸೇವಾ ಸೌಧದಲ್ಲಿ ಭವ್ಯ ರಕ್ತದಾನ ಶಿಬಿರ ನಡೆಯಿತು.ಈ ಶಿಬಿರದಲ್ಲಿ ನೂರಾರು ಯುವಕರು ಉತ್ಸಾಹದಿಂದ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಮಹತ್ವದ ಕಾರ್ಯಕ್ಕೆ ಕೈಜೋಡಿಸಿದರು.ಇದೇ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರು ಸ್ವತಃ ರಕ್ತದಾನ ಮಾಡಿ ಮಾದರಿಯಾದರು.