ಬೆಂಗಳೂರು ಪೂರ್ವ ನಗರ ಪಾಲಿಕೆಯ ವೈಟ್ ಫೀಲ್ಡ್ ಉಪವಿಭಾಗ ವ್ಯಾಪ್ತಿಯ ನಲ್ಲೂರಹಳ್ಳಿ, ವಿಕ್ಟೋರಿಯಾ ವ್ಯೂ ಬಡಾವಣೆಯಲ್ಲಿ ನಕ್ಷೆ ಮಂಜೂರಾತಿ ಪಡೆಯದೇ ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡವನ್ನು ಕಾರ್ಯಾಚರಣೆ ಮೂಲಕ ತೆರವುಗೊಳಿಸಲಾಯಿತು ಎಂದು ಆಯುಕ್ತರಾದ ಡಿ.ಎಸ್.ರಮೇಶ್ ರವರು ತಿಳಿಸಿದರು. ಮಹದೇವಪುರ ವಲಯದ ಜಂಟಿ ಆಯುಕ್ತರಾದ ಡಾ: ದಾಕ್ಷಾಯಿಣಿ ಕೆ. ಅವರ ನೇತೃತ್ವದಲ್ಲಿ ನಕ್ಷೆ ಮಂಜೂರಾತಿ ಪಡೆಯದೇ ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸಲಾಗಿದ್ದ ಆರು ಮಹಡಿ ಕಟ್ಟಡದ ತೆರವು ಕಾರ್ಯಾಚರಣೆಯನ್ನು ಗುರುವಾರ ಸಂಜೆ 5 ಗಂಟೆ ಸುಮಾರಿಗೆ ನಡೆಸಲಾಯಿತು.