ಚಳ್ಳಕೆರೆ: ಜುಂಜರಗುಂಟೆ ಗ್ರಾಮದಲ್ಲಿ ನಡೆದ ಶ್ರೀ ಆಂಜನೇಯಸ್ವಾಮಿ ಕಾರ್ತಿಕೋತ್ಸವದಲ್ಲಿ ಭಾಗಿಯಾದ ಶಾಸಕ ಟಿ. ರಘುಮೂರ್ತಿ
ಚಳ್ಳಕೆರೆ:ತಾಲೂಕಿನ ಜುಂಜರಗುಂಟೆ ಗ್ರಾಮದಲ್ಲಿ ಶ್ರೀ ಆಂಜನೇಯಸ್ವಾಮಿ ಕಾರ್ತಿಕೋತ್ಸವ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಭಾಗವಹಿಸಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ತಾಲ್ಲೂಕು ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ಬಸವರಾಜ್, ಚಳ್ಳಕೆರೆ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರದೀಪ್, ಚಳ್ಳಕೆರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್, ಮುಖಂಡರಾದ ಚನ್ನಕೇಶವ, ನಿಂಗಪ್ಪ, ದೇವಣ್ಣ, ಈರಣ್ಣ, ಅಶೋಕ, ಹನುಮಂತ, ಶೇಖರಪ್ಪ, ಸ್ವಾಮಿ, ಶಿವಣ್ಣ ಇದ್ದರು.