ದಾವಣಗೆರೆ: ಲಿಂಗತ್ವ ಅಲ್ಪಸಂಖ್ಯಾತ ಮತ್ತು ದಮನಿತ ಮಹಿಳೆಯರನ್ನೂ ಸಮಾನ ಅವಕಾಶ ಹಕ್ಕುಗಳು ಸಿಗುವಂತಾಗಲಿ: ನಗರದಲ್ಲಿ ಜಿಲ್ಲಾ ಪಂಚಾಯ್ತಿ ಸಿಇಓ ವಿಠಲ ರಾವ್
ಲಿಂಗತ್ವ ಅಲ್ಪಸಂಖ್ಯಾತ ಮತ್ತು ದಮನಿತ ಮಹಿಳೆಯರನ್ನು ಸಮಾನ ಅವಕಾಶ ಹಕ್ಕುಗಳು ಸಿಗುವಂತಾಗಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ಗಿತ್ತೆ ಮಾಧವ ವಿಠಲ ರಾವ್ ಹೇಳಿದರು. ಮಂಗಳವಾರ ಸಂಜೆ 4 ಗಂಟೆಗೆ ದಾವಣಗೆರೆ ನಗರದ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದ “ಲಿಂಗತ್ವ ಅಲ್ಪಸಂಖ್ಯಾತ ಮತ್ತು ದಮನಿತ ಮಹಿಳೆಯರಿಗೆ ಕಾನೂನು ಅರಿವು” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರು ಎಂದಾಕ್ಷಣ ಸಮಾಜ ಅವರನ್ನು ನೋಡುವ ದೃಷ್ಟಿಕೋನವೇ ಬೇರೆ. ಈ ರೀತಿ ತಾರತಮ್ಯ ಮಾಡದೇ ಪ್ರತಿಯೊಬ್ಬರನ್ನು ಸಮಾನ ದೃಷ್ಠಿಯಲ್ಲಿ ಕಾಣಬೇಕು. ಅವರು ಕೂಡ ಈ ವ್ಯವಸ್ಥೆಯ ಒಂದು ಭಾಗ. ಎಲ್ಲರಂತೆ ಅವರಿಗೂ ಕೂಡ, ಸಮಾನತೆ, ಸ್ವತಂತ್ರ ಹಕ್ಕುಗಳಿವೆ ಎಂದರು.