ಮನೆಯಲ್ಲಿ ಮಲಗಿದ್ದ ಯುವತಿಗೆ ಮಚ್ಚಿನಿಂದ ಹೊಡೆದು ಹಲ್ಲೆಗೊಳಿಸಿದ ಆರೋಪದಡಿ ಮನೆ ಕೆಲಸದ ಮಹಿಳೆಯನ್ನ ವೈಯಾಲಿ ಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 10ರಂದು ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ವೈಯಾಲಿ ಕಾವಲ್‌ನ ಬಸಪ್ಪ ಗಾರ್ಡನ್‌ನಲ್ಲಿ ಘಟನೆ ನಡೆದಿದ್ದು, ಸುಶ್ಮಿತಾ (21) ಎಂಬ ಯುವತಿ ಮೇಲೆ ಹಲ್ಲೆಗೈದ ಆರೋಪದಡಿ ಲಲಿತಾ ಎಂಬಾಕೆಯನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.