ಹಾಸನ: ಹಾಸನಾಂಬ ದೇವಿ ದರ್ಶನ: 30 ಲಕ್ಷ ಭಕ್ತರ ನಿರೀಕ್ಷೆ, ಸಿದ್ಧತೆ ಹೇಗಿದೆ?
Hassan, Hassan | Oct 2, 2026 ಅಕ್ಟೋಬರ್ 29 ರಿಂದ ನವೆಂಬರ್ 11 ರವರೆಗೆ ನಡೆಯಲಿರುವ ಹಾಸನಾಂಬ ದೇವಿಯ ದರ್ಶನ ಮತ್ತು ಜಾತ್ರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡುತ್ತಿದೆ. 30 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ದರ್ಶನಕ್ಕೆ ಸುಗಮ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿ ಲತಾಕುಮಾರಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.