ಚಿಕ್ಕಮಗಳೂರು: ಪ್ರಧಾನಿ ಮೋದಿ ಹುಟ್ಟು ಹಬ್ಬದ ಹಿನ್ನೆಲೆ ಹಿರೇಮಗಳೂರು ಕೊದಂಡರಾಮಸ್ವಾಮಿ ದೇವಾಲಯದ ಆವರಣ ಸ್ವಚ್ಛ ಮಾಡಿದ ಬಿಜೆಪಿ ಪಡೆ..!
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಎಪ್ಪತೈದನೇ ವರ್ಷದ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಹಿರೇಮಗಳೂರಿನ ಕೋದಂಡರಾಮಸ್ವಾಮಿ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ, ಪುಷ್ಪರಾಜ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಈ ಒಂದು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.