ಹೊನ್ನಾಳ್ಳಿ: ಪಟ್ಟಣದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಆಗ್ರಹಿಸಿ ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆದು ಬಿಜೆಪಿ ಪ್ರತಿಭಟನೆ
ಪಟ್ಟಣದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಆಗ್ರಹಿಸಿ ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆದು ಬಿಜೆಪಿ ಪ್ರತಿಭಟನೆ ರಸ್ತೆ ಗುಂಡಿಗಳನ್ನು ಮುಚ್ಚಲು ಆಗ್ರಹಿಸಿ ಬಿಜೆಪಿ ವತಿಯಿಂದ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಬುಧವಾರ ಮಧ್ಯಾಹ್ನ 1 ಗಂಟೆಗೆ ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ರಸ್ತೆಗಳನ್ನು ಡಾಂಬರೀಕರಣಗೊಳಿಸದೆ ಗುಂಡಿಗಳನ್ನು ರಸ್ತೆಗಳನ್ನಾಗಿ ಪರಿವರ್ತಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದ ಮಾಜಿ ಸಚಿವ ರೇಣುಕಾಚಾರ್ಯ ಮಾತನಾಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.