ಯಳಂದೂರು: ಕೆಸ್ತೂರು, ಕೆ.ಹೊಸೂರು ಗ್ರಾಮದಲ್ಲಿ ಮಳೆ ಅವಾಂತರ- ರಸ್ತೆ, ಮನೆಗಳು ಜಲಾವೃತ
ನಿನ್ನೆ ರಾತ್ರಿ ಸುರಿದ ಜೋರು ಮಳೆಗೆ ರಸ್ತೆಗಳು, ಮನೆಗಳು ಜಲಾವೃತಗೊಂಡು ಅವಾಂತರ ಸೃಷ್ಟಿಸಿದ ಘಟನೆ ಯಳಂದೂರು ತಾಲೂಕಿನ ಕೆಸ್ತೂರು, ಕೆ ಹೊಸೂರು, ಬೀಚಹಹಳ್ಳಿ ಹೊಸ ಬಡಾವಣೆಗಳಲ್ಲಿ ನಡೆದಿದೆ. ಜೋರು ಮಳೆಯಿಂದಾಗಿ ರಸ್ತೆಗಳು, ಮನೆಗಳು ಜಲಾವೃತಗೊಂಡು ಜನರು ಪರದಾಡಿದರು. ಮಳೆ ನೀರು ಸರಾಗವಾಗಿ ಹರಿಯದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಜನರು ಪಡಿಪಾಟಲು ಪಟ್ಟಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ಪ್ರಕೃತಿ ವಿಕೋಪಕ್ಕೆ ಒಳಗಾಗಿರುವ ಕುಟುಂಬಗಳಿಗೆ ಸೂಕ್ತ ರಕ್ಷಣೆ ಮತ್ತು ಪರಿಹಾರ ನೀಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.