ಮಾದಕ ದ್ರವ್ಯಗಳನ್ನು ತ್ಯಜಿಸಿ,ಸಾಮಾಜಿಕ ಜೀವನಕ್ಕೆ ಮುನ್ನುಡಿ ಬರೆಯಿರಿ: ದಯಾನಂದ್ ಯುವ ಸಮುದಾಯ ಮಾದಕ ದ್ರವ್ಯಗಳ ಸೇವನೆಯನ್ನು ತ್ಯಜಿಸುವುದರ ಮೂಲಕ ಉತ್ತಮ ಸಾಮಾಜಿಕ ಜೀವನಕ್ಕೆ ಮುನ್ನುಡಿ ಬರೆಯಬೇಕು ಎಂದು ಪೊಲೀಸ್ ಇನ್ಸ್ಪೆಕ್ಟರ್ ದಯಾನಂದ್ ಅಭಿಪ್ರಾಯಪಟ್ಟರು. ಪಟ್ಟಣದ ಸಿ ರಹೀಂ ಕಾಂಪೌಂಡ್ ಬಡವಾಣೆಯಲ್ಲಿ ಪೊಲೀಸ್ ಇಲಾಖೆ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ಅವರು, ಮಾದಕ ದ್ರವ್ಯ ಸೇವನೆಯಿಂದ ವ್ಯಕ್ತಿಯ ದೈಹಿಕ, ಮಾನಸಿಕ, ಭಾವನಾತ್ಮಕ ಅಥವಾ ನಡವಳಿಕೆಯ ಸ್ಥಿತಿಯನ್ನು ಬದಲಾಯಿಸುವ ಮೂಲಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದರು ಎಂದರು.