ಬಳ್ಳಾರಿ: ನಗರದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ: ಗಣ್ಯರಿಂದ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಅರ್ಪಣೆ
ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ಪೊಲೀಸ್ ಹುತಾತ್ಮರ ದಿನ ಆಚರಿಸಲಾಯಿತು. ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ವರ್ತಿಕ ಕಟಿಯಾರ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಡಾ.ಶೋಭಾರಾಣಿ.ವಿ.ಜೆ. ಅವರು ಸೇರಿದಂತೆ ಇತರೆ ಅಧಿಕಾರಿಗಳು ಹುತಾತ್ಮರಾದ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದರು.ಹುತಾತ್ಮ ಯೋಧರಿಗೆ ಗೌರವ ಸೂಚಕವಾಗಿ ಪೊಲೀಸ್ ಬ್ಯಾಂಡ್‌ನವರು ಶೋಕಗೀತೆ ನುಡಿಸಿದರು. ನಂತರ ಪೊಲೀಸ್ ಶಸ್ತ್ರಪಡೆಯ ಸಿಬ್ಬಂದಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸ್ ಹುತಾತ್ಮರಿಗೆ ಗೌರವ ಸಲ್ಲಿಸಿದರು. ಪೊಲೀಸ್ ಧ್ವಜ ಅರ್ಧಕ್ಕೆ ಇಳಿಸಿ ಎರಡು ನಿಮಿಷ ಮೌನ ಆಚರಿಸಲಾಯಿತು. ಬಳಿಕ ಮಾತನಾಡಿದ