ಕಾರವಾರ:ಜಿಲ್ಲಾಡಳಿತ ವಿವಿಧ ಇಲಾಖೆ ಗಳ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ, ಕಾರವಾರದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಉದ್ಘಾಟಿಸಿ ಮಾತನಾಡಿಉತ್ಪಾದಕರು ಕೇವಲ ಲಾಭ ಗಳಿಸುವ ಉದ್ದೇಶದಿಂದ ವಸ್ತುಗಳನ್ನು ಉತ್ಪಾದಿಸಿ ಮಾರಾಟ ಮಾಡುವಂತ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಗ್ರಾಹಕರು ಸರಕು, ಸೇವೆಗಳನ್ನು ಪಡೆಯುವಾಗ ಹಿಂದಿಗಿAತಲೂ ಹೆಚ್ಚು ಜಾಗೃತರಾಗಬೇಕು. ಗ್ರಾಹಕರ ಹಕ್ಕುಗಳ ಮಹತ್ವ, ಕರ್ತವ್ಯವನ್ನು ತಿಳಿದುಕೊಳ್ಳಬೇಕು ಎಂದರು.