ಮಳವಳ್ಳಿ: ಸಾಗುವಳಿದಾರ ರೈತರಿಗೆ ತಕ್ಷಣ ಸಾಗುವಳಿ ಪತ್ರ ನೀಡುವಂತೆ ಆಗ್ರಹಿಸಿ ಪಟ್ಟಣದಲ್ಲಿ ಪ್ರಾಂತ ರೈತ ಸಂಘ ಪ್ರತಿಭಟನೆ
ಮಳವಳ್ಳಿ : ತಾಲ್ಲೂಕಿನಲ್ಲಿ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರ ನೀಡುವುದರ ಜೊತೆಗೆ ಸಾಗುವಳಿದಾರರ ಒಕ್ಕಲೆ ಬ್ಬಿಸುವ ಪಟ್ಟಭದ್ರರರ ಪರವಾಗಿ ರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರಾಂತ ರೈತಸಂಘದ ಮುಖಂಡರು ಹಾಗೂ ರೈತರು ಮಳವಳ್ಳಿ ಪಟ್ಟಣ ದಲ್ಲಿ ಪ್ರತಿಭಟನೆ ನಡೆಸಿದರು. ಇಲ್ಲಿನ ತಾಲ್ಲೂಕು ಕಚೇರಿ ಮುಂದೆ ಸೋಮವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಪ್ರತಿಭಟನಾ ಧರಣಿ ನಡೆಸಿದ ಸಂಘಟನೆಯ ಮುಖಂಡರು ಹಾಗೂ ಸಾಗುವಳಿ ದಾರ ರೈತರು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದರು.