ರಾಯಚೂರು: ರಾಯಚೂರು : ರಾಣಿ ಚನ್ನಮ್ಮ ಅವರ ಧೈರ್ಯ, ಸಾಹಸ ಪ್ರತಿಯೊಬ್ಬ ಮಹಿಳೆಗೂ ಆದರ್ಶ
ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಅವರು ತೋರಿದಂತಹ ಧೈರ್ಯ, ಸಾಹಸ ನಾಡಿನ ಪ್ರತಿಯೊಬ್ಬ ಮಹಿಳೆಗೂ ಆದರ್ಶವಾದದ್ದು, ಪ್ರತಿಯೊಬ್ಬ ಮಹಿಳೆಗೂ ಸ್ಫೂರ್ತಿದಾಯಕವಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಕುಮಾರಸ್ವಾಮಿ ಅವರು ಹೇಳಿದರು. ಅಕ್ಟೋಬರ್ 23ರ ಗುರುವಾರ ದಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು, ಬಾಲ್ಯದಿಂದಲೇ ಕುದುರೆ ಸವಾರಿ, ಕತ್ತಿ ಬಳಸುವ ಪರಿಗಳ ಬಗ್ಗೆ ತರಬೇತಿ ಪಡೆದಿದ್ದರು. ಚನ್ನಮ್ಮ ಅವರು ತನ್ನ ರಾಜ್ಯದ ರಕ್ಷಣೆಗಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಮೊದಲ ಮಹಿಳೆ. ಚನ್ನಮ್ಮ ಅವರ ಜೀವನ ಮತ್ತು ಹೋರಾಟ ನಾಡಿನ ಪ್ರತಿಯೊಬ್ಬ ಮಹಿಳೆಗೂ ಸ್ಫೂರ್