ದೊಡ್ಡಬಳ್ಳಾಪುರ: ಕೊನಘಟ್ಟ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಸಚಿವ ಕೆಎಚ್ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ರಕ್ತದಾನ ಶಿಬಿರ ಹಾಗೂ ಹಿರಿಯ ನಾಗರಿಕರಿಗೆ ಬೆಡ್ ಶೀಟ್ ವಿತರಣೆ ಹಾಗೂ ಆಶಾ ಕಾರ್ಯಕರ್ತರಿಗೆ ಸನ್ಮಾನಿಸಿ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ನಾಗರಿಕ ಸರಬರಾಜು ಇಲಾಖೆಯ ಸಚಿವರಾದ ಕೆಎಚ್ ಮುನಿಯಪ್ಪನವರು ಭಾನುವಾರ ಮಧ್ಯಾನ ಹನ್ನೆರಡು ಮೂವತ್ತರ ಸುಮಾರಿಗೆ ಉದ್ಘಾಟಿಸಿದರು