ಚಿತ್ರದುರ್ಗದ ಐತಿಹಾಸಿಕ ಕೋಟೆ ಒತ್ತುವರಿ ತೆರವು ಮಾಡುವಂತೆ ಒತ್ತಾಯಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇನ್ನೂ ಗುರುವಾರ ಮಧ್ಯಾಹ್ನ 12 ಗಂಟೆಗೆ ಕರುನಾಡ ಸೇನೆ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ಮೂಲಕ ಮನವಿ ಸಲ್ಲಿಸಿದ್ದಾರೆ. ಐತಿಹಾಸಿಕ ಚಿತ್ರದುರ್ಗ ಸ್ಮಾರಕಗಳು, ಕೋಟೆ ಇನ್ನಿತರೆ ಪ್ರೇಕ್ಷಣಿಯ ಸ್ಥಳಗಳ ಸುತ್ತ-ಮುತ್ತ ಈಗಾಗಲೇ ಒತ್ತುವರಿಯಾಗಿ ಮನೆಗಳನ್ನು ಕಟ್ಟಿಕೊಂಡು ಸಾರ್ವಜನಿಕರು ವಾಸಿಸುತ್ತಿರುವುದು ಕಂಡುಬರುತ್ತದೆ