ಶಿಡ್ಲಘಟ್ಟ: ವೈ ಹುಣಸೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಕಾನೂನು ಸೇವಾ ಸಮಿತಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಕಾನೂನು ಅರಿವು ನೆರವು ಕಾರ್ಯಕ್ರಮ
ಶಿಡ್ಲಘಟ್ಟ ತಾಲ್ಲೂಕಿನ ವೈ.ಹುಣಸೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಕಾನೂನು ಸೇವಾ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ "ಕಾನೂನು ಅರಿವು, ನೆರವು ಹಾಗೂ ಪೌಷ್ಟಿಕ ಆಹಾರ ಜಾಗೃತಿ ಕಾರ್ಯಕ್ರಮ"ದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಅವರು ಮಾತನಾಡಿದರು. ಮನೆಯ ಅಡುಗೆ, ಹಣ್ಣು, ಹಸಿ ತರಕಾರಿ ಸೇವನೆ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಅಗತ್ಯ. ಬೀದಿ ಬದಿ ತಯಾರಾಗುವ ಜಂಕ್ ಫುಡ್ ಸೇವನೆಯನ್ನು ದೂರವಿರಿಸಿ, ಉತ್ತಮ ಪೌಷ್ಟಿಕ ಆಹಾರದಿಂದ ಆರೋಗ್ಯಕರ ಜೀವನ ಕಟ್ಟಿಕೊಳ್ಳಬೇಕು" ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು