ರಾಜಕೀಯದಲ್ಲಿ ಎಷ್ಟೇ ಪ್ರೀತಿ- ವಿಶ್ವಾಸಗಳಿದ್ದರೂ ಹೊಂದಾಣಿಕೆಯ ನಾಟಕ ನನ್ನ ಬಳಿ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ವಿಧಾನಸೌಧದ ವಿರೋಧ ಪಕ್ಷದ ನಾಯಕರ ಕಚೇರಿಯಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಾಚ್ ವಿಚಾರದಲ್ಲಿ ನನ್ನ ಹೇಳಿಕೆಯಿಂದ ಡಿ.ಕೆ.ಶಿವಕುಮಾರರಿಗೆ ಬೇಸರ ಆದರೆ ನಾನೇನೂ ಮಾಡಲಾಗದು ಎಂದು ಸ್ಪಷ್ಟಪಡಿಸಿದರು. ಈಗಲೂ ಅವರ ಹೂಬ್ಲೋಟ್ ವಾಚ್ ಕಾಣುತ್ತಿಲ್ಲ ಎಂದು ತಿಳಿಸಿದರು. ಅದು ಅಫಿಡವಿಟ್ನಲ್ಲಿಲ್ಲ. ಈಗ ನೀವು ಕಾರ್ಟಿಯರ್ ವಾಚ್ ವಿಚಾರವನ್ನು ಲೋಕಾಯುಕ್ತಕ್ಕೆ ಕೊಟ್ಟಿದ್ದೀರಿ. ಹಿಂದೆ ಅಫಿಡವಿಟ್ನಲ್ಲಿ ಕೊಟ್ಟಿಲ್ಲ; ಅದು ಕೂಡ ಅಪರಾಧವೇ ಎಂದು ಗಮನ ಸೆಳೆದರು.