ಬೆಂಗಳೂರು ಉತ್ತರ: ನಗರದಲ್ಲಿ ಕಾಲೇಜು ಮತ್ತು ವಿವಿಗಳಲ್ಲಿ ವಿದ್ಯಾರ್ಥಿ ಚುನಾವಣೆಗೆ ಸಮಿತಿ ಸಭೆ
13- ಕಾಲೇಜುಗಳು ಹಾಗೂ ವಿವಿಯಲ್ಲಿ ವಿದ್ಯಾರ್ಥಿ ಚುನಾವಣೆಗಳನ್ನು ನಡೆಸುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರು ರಚಿಸಿದ ಸಮಿತಿಯು ಮಂಗಳವಾರ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ಮೊದಲ ಸಭೆ ನಡೆಸಿತು. ಬೆಂಗಳೂರಿನ ಕೆಪಿಸಿಸಿ ಭವನದಲ್ಲಿ ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ನಡೆದ ಸಭೆಯಲ್ಲಿ ಸಮಿತಿಯು, ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸುವ ಕುರಿತು ಸಾಧಕ ಬಾಧಕಗಳ ಬಗ್ಗೆ ಸುಧೀರ್ಘ ಚರ್ಚೆ ನಡೆಸಿತು. ಕಾಲೇಜುಗಳು ಹಾಗೂ ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿ ಚುನಾವಣೆಗಳನ್ನು ನಡೆಸುವ ಅಗತ್ಯತೆ, ಪ್ರಸ್ತುತತೆ, ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳು,