ಶಿವಮೊಗ್ಗ: ಹೊಳೆ ಸೇತುವೆ ಬಳಿ ಬೈಕ್ ಮತ್ತು ಆಟೋ ನಡುವೆ ಡಿಕ್ಕಿ ಬೈಕ್ ಸವಾರ ಗಂಭೀರ
ಶಿವಮೊಗ್ಗದ ಹೊಳೆ ಸೇತುವೆ ಬಳಿ ಬೈಕ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ ಜರುಗಿದೆ. ಹೊಳೆ ಸೇತುವೆ ಬಳಿ ನಡೆದ ಅಪಘಾತದಲ್ಲಿ ಚೆನ್ನಗಿರಿ ತಾಲೂಕಿನ ಬಸವನಹಳ್ಳಿ ಗ್ರಾಮದ ಯುವಕ ಅನಿಲ್ ಎಂಬತಾ ಗಂಭೀರವಾಗಿ ಗಾಯಗೊಂಡಿದ್ದಾನೆ .ಇನ್ನಾ ಸ್ಥಳೀಯರು ಆತನನ್ನ ಕೂಡಲೇ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.