ಮಳವಳ್ಳಿ : ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಉಪ ಮುಖ್ಯಯನ್ನಾಗಿ ಮಾಡುವುದರ ಜೊತೆಗೆ ಮಳವಳ್ಳಿ ಕ್ಷೇತ್ರದ ಶಾಸಕ ಪಿ ಎಂ ನರೇಂದ್ರ ಸ್ವಾಮಿ ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಮೈಸೂರು ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ರಾದ ಜನಾಬ್ ಅಜ಼ೀಜ್ ಉಲ್ಲಾ ಉರುಫ್ ಅಜ್ಜು ಕಾಂಗ್ರೆಸ್ ಹೈಕಮಾಂಡ್ ನ್ನು ಆಗ್ರಹಿಸಿದ್ದಾರೆ. ಮಳವಳ್ಳಿ ಪಟ್ಟಣದ ಪೇಟೆ ಮುಸ್ಲಿಂ ಬ್ಲಾಕ್ ನಲ್ಲಿರುವ ಗುಲ್ ಷನ್ ಶಾದಿ ಮಹಲ್ ನಲ್ಲಿ ಜರೀನ್ ಅಲೀಮ್ ಚಾರಿಟಬಲ್ ಟ್ರಸ್ಟ್, ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿಗುರುವಾರ ಏರ್ಪಡಿಸಲಾಗಿದ್ದ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರದ ಸಾಯಂಕಾಲ 5.30 ರ ಸಮಯದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.