ಗುಂಡ್ಲುಪೇಟೆ: ಪಟ್ಟಣದಲ್ಲಿ ನಡೆದ ವಿಶ್ವಕರ್ಮ ಜಯಂತಿಗೆ ಅಧಿಕಾರಿಗಳ ಗೈರು- ಮುಖಂಡರ ಆಕ್ರೋಶ
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿವರ್ಗ ಗೈರು ಹಾಜರಾಗುವ ಮೂಲಕ ಸಮುದಾಯಕ್ಕೆ ಅಪಮಾನ ಎಸಗಿದ್ದಾರೆ ಎಂದು ಮುಖಂಡರು ಬುಧವಾರ ಆಕ್ರೋಶ ಹೊರಹಾಕಿದ್ದಾರೆ. ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅನುಪಸ್ಥಿತಿಯಲ್ಲಿ ಇಂದು ನಡೆದ ವಿಶ್ವಕರ್ಮ ಜಯಂತಿಗೆ ಗೈರಾದ ಅಧಿಕಾರಿಗಳ ವಿರುದ್ಧ ಸಮುದಾಯದ ಮುಖಂಡರು ಆಕ್ರೋಶ ಹೊರಹಾಕಿದರು, ಜಯಂತಿ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಇಲಾಖೆ ಅಧಿಕಾರಿಗಳು ಹಾಜರಿರಬೇಕು ಎಂಬ ನಿಯಮವಿದ್ದರು ಕಾಟಾಚಾರಕ್ಕೆ ಕೆಲವೇ ಕೆಲವು ಮಂದಿ ಭಾಗವಹಿಸಿ ಪುಷ್ಪಾರ್ಚನೆ ಸಲ್ಲಿಸಿ ತೆರಳಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.