ರಾಯಚೂರು: ನಗರದಲ್ಲಿ ಬೈಕ್ ಸ್ಕಿಡ್ ಆಗಿ ನೆಲಕ್ಕೆ ಬಿದ್ದ ಬೈಕ್ ಸವಾರ; ತಪ್ಪಿದ ಅನಾಹುತ
ನಗರದಲ್ಲಿ ದಸರಾ ಹಬ್ಬದ ಖರೀದಿ ಜೋರಾಗಿದ್ದು , ನಗರದ ಮಹಾವೀರ ವೃತ್ತದ ಮಾರುಕಟ್ಟೆಯಲ್ಲಿ ಜನದಟ್ಟಣೆ ಉಂಟಾಗಿದೆ . ಈ ನಡುವೆ , ಸೆ.28 ರ ರವಿವಾರ ಮಧ್ಯಾಹ್ನ 1 ಗಂಟೆಗೆ ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಸವಾರರೊಬ್ಬರು ಸ್ಕಿಡ್ ಆಗಿ ಬಿದ್ದು ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಮುಂದೆ ಹೋಗುತ್ತಿದ್ದ ಬೈಕ್ ಸವಾರ ದಿಢೀರ್ ಬ್ರೇಕ್ ಹಾಕಿದ್ದರಿಂದ ಈ ಘಟನೆ ನಡೆದಿದೆ . ಅದೃಷ್ಟವಶಾತ್ ದೊಡ್ಡ ಗಾಯಗಳಾಗಿಲ್ಲ , ಕೈ ಮತ್ತು ಕಾಲಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಈ ಕುರಿತು ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.