ಮದ್ದೂರು: ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸೌಹಾರ್ದ ಸಾಮರಸ್ಯ ನಡಿಗೆ ಕಾರ್ಯಕ್ರಮ, ಭಾರೀ ಪೊಲೀಸ್ ಬಿಗಿ ಬಂದೋಬಸ್ತ್
Maddur, Mandya | Sep 22, 2025 ಮದ್ದೂರು ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸೌಹಾರ್ದ ಸಾಮರಸ್ಯ ನಡಿಗೆ ಕಾರ್ಯಕ್ರಮದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಭಾರೀ ಪೊಲೀಸ್ ಬಿಗಿಬಂದೋಬಸ್ತ್ ಏರ್ಪಡಿಸಲಾಗಿತ್ತು. ಮದ್ದೂರು ಪಟ್ಟಣದಲ್ಲಿ ಕೆಲ ದಿನಗಳ ಹಿಂದೆ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದ ನಂತರ ಕೆಲ ನಾಯಕರು ಕೋಮು ದ್ವೇಷ ಕೆರಳಿಸಿ ಪ್ರಚೋಧನೆಯ ಮಾತುಗಳನ್ನಾಡಿದ್ದರು. ಇದಕ್ಕೆ ಪ್ರತಿಯಾಗಿ ಜಿಲ್ಲೆಯ ಜನಪರ ಸಂಘಟನೆಗಳು ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದ ನಡುವೆಯೂ ಸೋಮವಾರ ನೂರಾರು ಸಂಖ್ಯೆಯಲ್ಲಿ ಸಂಘಟನೆ ಮುಖಂಡರು, ಕಾರ್ಯಕರ್ತರು ಪ್ರೊ.ನಂಜುಂಡಸ್ವಾಮಿ ಪುತ್ಥಳಿ ಬಳಿ ಜಮಾಯಿಸಿ ಕೋಮುವಾದಿಗಳ ಸ್ವಾರ್ಥ ರಾಜಕೀಯಕ್ಕೆ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಪಟ್ಟಣದ ಪ್ರೊ.ನಂಜುಂಡಸ್ವಾಮಿ ಪುತ್ಥಳಿ ಬಳಿ ಬ್ಯಾರಿಕೇಡ್ ನ