ಶಿವಮೊಗ್ಗ: ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ನಗರದಲ್ಲಿ ಬಂಜಾರ ಸಮುದಾಯದಿಂದ ಪ್ರತಿಭಟನೆ
ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಸೆಪ್ಟೆಂಬರ್ 12ರಿಂದ 20ರವರೆಗೆ ಅನಿತಿಷ್ಟಾವಧಿ ಧರಣಿಯನ್ನ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶಿವಮೊಗ್ಗ ಜಿಲ್ಲಾ ಬಂಜಾರ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ಬುಧವಾರ ಸಹ ಒಳ ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು ಅದೇ ವೈಜ್ಞಾನಿಕವಾಗಿ ಒಳಮೀಸಲಾತಿಯನ್ನ ಜಾರಿಗೊಳಿಸುವಂತೆ ಪತ್ರ ಚಳುವಳಿಯನ್ನು ನಡೆಸಿದರು.