ಚಡಚಣ: ಮಹಾರಾಷ್ಟ್ರದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆ ತಾಲೂಕಿನ ಹಲವು ಬ್ರೀಡ್ಜ್ ಕಂ ಬ್ಯಾರೇಜ್ ಜಲಾವೃತ
ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾದ ಹಿನ್ನಲೆಯಲ್ಲಿ, ಭೀಮಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆಯಾಗಿದೆ. ಮಹಾರಾಷ್ಟ್ರದ ಉಜನಿ ವೀರ್ ಜಲಾಶಯಗಳಿಂದ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಭೀಮಾನದಿ ತಟದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಚಡಚಣ ಇಂಡಿ ಆಲಮೇಲ ತಾಲೂಕಿನ ಭಾಗಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಭೀಮಾನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿರೋ ಬ್ರಿಡ್ಜ್ ಕಂ ಬ್ಯಾರೇಜ್ ಗಳು ಜಲಾವೃತವಾಗಿವೆ...