ಬೆಂಗಳೂರು ಉತ್ತರ: ಡಿಕೆ ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ: ನಗರದಲ್ಲಿ ಡಿಕೆ ಸುರೇಶ್
ಮಾಜಿ ಸಂಸದ ಹಾಗೂ ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು, ಡಿಕೆ ಶಿವಕುಮಾರ್ ಅವರ ನಾಯಕತ್ವ ಮತ್ತು ಪಕ್ಷದ ಶಿಸ್ತಿನ ಬಗ್ಗೆ ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸದಾಶಿವನಗರದಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಡಿಕೆ ಶಿವಕುಮಾರ್ ಮೊದಲಿನಿಂದಲೂ ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷದ ಹಿತದೃಷ್ಟಿಯಿಂದ, ಶಾಸಕರ ಹಾಗೂ ಕಾರ್ಯಕರ್ತರ ಹಿತದೃಷ್ಟಿಯಿಂದ ಎಲ್ಲವನ್ನೂ ತಾಳ್ಮೆಯಿಂದ ನಡೆಸುತ್ತಿದ್ದಾರೆ ಎಂದರು. ಪಕ್ಷದ ಆದೇಶಕ್ಕಾಗಿ ಡಿಕೆಶಿ ಕಾಯುತ್ತಿದ್ದಾರೆ. ಅಧಿಕಾರ ಯಾರಿಗೂ ಅಷ್ಟು ಸುಲಭವಾಗಿ ಬರುವುದಿಲ್ಲ, ಸಿಎಂ ಸ್ಥಾನ ಅಷ್ಟು ಸುಲಭವಾಗಿ ಸಿಗುವ ಹುದ್ದೆಯಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರು. ನಮ್ಮ ಗುರಿ 2028ರ ವಿಧಾನಸಭಾ ಚುನಾವಣೆ ಎಂದು ತಿಳಿಸಿದ ಅವರು,