ಮದ್ದೂರು: ಚನ್ನೇಗೌಡ ಬಡಾವಣೆಯ ನಿವಾಸಿಗಳಿಂದ ಗಣೇಶ ವಿಸರ್ಜನೆ: ಪಟ್ಟಣದ ಮಸೀದಿ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್
Maddur, Mandya | Sep 18, 2025 ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯ ನಿವಾಸಿಗಳಿಂದ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಪಟ್ಟಣದ ಮಸೀದಿ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆ ಕಲ್ಲು ತೂರಾಟ ಘಟನೆ ನಡೆದಿದ್ದ ಮಸೀದಿಯ ಮುಂದೆ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಪ್ರತಿಷ್ಟಾಪಿಸಲಾಗಿದ್ದ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಯನ್ನು ಪೊಲೀಸ್ ಬಿಗಿ ಬಂದೋಬಸ್ತ್ ಗುರುವಾರ ನಡೆಸಲಾಯಿತು. ಚನ್ನೇಗೌಡ ಬಡಾವಣೆಯ ಗೆಳೆಯರ ಬಳಗದ ವತಿಯಿಂದ ಗಣೇಶ ಚತುರ್ಥಿಯಂದು ಮೂರ್ತಿಯನ್ನು ಪ್ರತಿಷ್ಟಾಪಿಸಲಾಗಿತ್ತು, ಗುರುವಾರ ಮೂರ್ತಿಯ ವಿಸರ್ಜನಾ ಮೆರವಣಿಗೆಗೆ ಅನುಮತಿ ಪಡೆಯಲಾಗಿತ್ತು. ಮೆರವಣಿಗೆಯಲ್ಲಿ ಅಕ್ಕ ಪಕ್ಕದ ಗ್ರಾಮಗಳ ದೇವರ ಕುಣಿತ, ಕೇರಳದ ಡೊಳ್ಳು ಕುಣಿತಗಳ ತಂಡಗಳು, ಆಂಜನೇಯ ಸೇರಿದಂ