ಚಿಕ್ಕಬಳ್ಳಾಪುರ: ರೈತರಿಗೆ ಬೆಳೆ ವಿಮೆಗೆ ಅರ್ಜಿ ಆಹ್ವಾನ: ಚಿಕ್ಕಬಳ್ಳಾಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಪ್ರಕಟಣೆ
2024ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಯಡಿ ಚಿಕ್ಕಬಳ್ಳಾಪುರ ತಾಲ್ಲೂಕಿನ ಮೂರು ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಅನ್ವಯವಾಗುವಂತೆ ಮಾವು, ದ್ರಾಕ್ಷಿ ಮತ್ತು ದಾಳಿಂಬೆ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಇಂದು ಮಂಗಳವಾರ ಸಂಜೆ 4 ಗಂಟೆಯಲ್ಲಿ ತೋಟಗಾರಿಕೆ ಇಲಾಖೆ, ಚಿಕ್ಕಬಳ್ಳಾಪುರ ಇವರು ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ತಾಲ್ಲೂಕಿನ ಎಲ್ಲಾ ಮಾವು, ದ್ರಾಕ್ಷಿ ಮತ್ತು ದಾಳಿಂಬೆ ಬೆಳೆಗಾರರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿ ಪ್ರಕೃತಿ ವಿಕೋಪದಿಂದ ಆಗುವ ಆರ್ಥಿಕ ನಷ್ಟವನ್ನು ವಿಮಾ ಕಂಪನಿಯಿಂದ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.