ಪಾನಮತ್ತನಾಗಿ ಕಾರು ಚಲಾಯಿಸಿ ವಿದ್ಯುತ್ ಕಂಬ ಮತ್ತು ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆಸಿದ್ದ ಚಾಲಕನಿಗೆ ಸಾಗರದ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಮಂಗಳವಾರ ಬೆಳಿಗ್ಗೆ 11 ಗಂಟೆಗೆ 20 ಸಾವಿರ ರೂ. ದಂಡ ವಿಧಿಸಿದೆ. ಸಾಗರ ತಾಲೂಕಿನ ಕೊರ್ಲಿಕೊಪ್ಪದ ವಿನೀತ್ ಎಂಬುವರು ದಂಡ ಕಟ್ಟಿದವರು. ಡಿ.11ರಂದು ಸಾಗರ ಟೌನ್ ಪೊಲೀಸ್ ಠಾಣೆ ಎದುರು ವಿದ್ಯುತ್ ಕಂಬಕ್ಕೆ ಕಾರು 'ಡಿಕ್ಕಿ ಹೊಡೆದಿತ್ತು. ಚಾಲಕ ಮದ್ಯ ಸೇವನೆ ಮಾಡಿರುವುದು ದೃಢಪಟ್ಟಿತ್ತು. ಅಪಘಾತದ ತೀವ್ರತೆಗೆ ವಿದ್ಯುತ್ ಕಂಬ ಮುರಿದು ಬಿದ್ದಿತ್ತು. ಅದಕ್ಕೂ ಮುನ್ನ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಈ ಬಗ್ಗೆ ಸಾಗರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.