ಶ್ರೀನಿವಾಸಪುರ: ಭಾರಿ ಮಳೆಯಿಂದ ಪಟ್ಟಣದಲ್ಲಿ ನೆಲಕ್ಕುರುಳಿದ ವಿದ್ಯುತ್ ಕಂಬಗಳು : ಜಖಂ ಗೊಂಡ ಆಟೋ
ಭಾರಿ ಮಳೆಯಿಂದ ನೆಲಕ್ಕುರುಳಿದ ವಿದ್ಯುತ್ ಕಂಬಗಳು : ಜಾಖಂ ಗೊಂಡ ಆಟೋ ಮೂರು ದಿನಗಳಿಂದ ಕೋಲಾರ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಶ್ರೀನಿವಾಸಪುರ ಪಟ್ಟಣದ ಕೋಲಾರ ಸರ್ಕಲ್ ಬಳಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಮಳೆಯ ಆರ್ಭಟಕ್ಕೆ ಬೃಹತ್ ಮರವೊಂದು ಧರೆಗೆ ಉರುಳಿ ವಿದ್ಯುತ್ ತಂತಿಗಳ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ನಾಲ್ಕು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಈ ಸಂದರ್ಭದಲ್ಲಿ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾ ಮೇಲೂ ಮರದ ಕೊಂಬೆಗಳು ಬಿದ್ದು ಭಾಗಶಃ ಹಾನಿಯಾಗಿದೆ. ಅದೃಷ್ಟವಶಾತ್, ಘಟನೆ ನಡೆದ ಸಮಯದ