ಹೆಬ್ರಿ: ಹೆಬ್ರಿಯಲ್ಲಿ ಸಂಭ್ರಮ ಸಡಗರದ ಕೊರಗರ ಭೂಮಿ ಹಬ್ಬ
Hebri, Udupi | Aug 19, 2025 ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ - ಕೇರಳ ವತಿಯಿಂದ 18ನೇ ವರ್ಷದ ಕೊರಗರ ಭೂಮಿ ಹಬ್ಬ ಹೆಬ್ರಿ ಬಡಾಗುಡ್ಡೆ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಹೆಬ್ರಿ ಬಸ್ ನಿಲ್ದಾಣದಿಂದ ಬಡಾಗುಡ್ಡೆ ಸಮುದಾಯ ಭವನಕ್ಕೆ ಹೊರಟ ಕಾಲ್ನಡಿಗೆ ಜಾಥಕ್ಕೆ ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ತಾರನಾಥ ಬಂಗೇರರವರು ಡೋಲು ಬಾರಿಸುವುದರೊಂದಿಗೆ ಚಾಲನೆ ನೀಡಿ ಭೂಮಿ ಹಬ್ಬಕ್ಕೆ ಶುಭವನ್ನು ಕೋರಿದರು. ಜಾಥದಲ್ಲಿ ಡೋಲು, ಚೆಂಡೆ, ಕೊಳಲು ವಾದನಕ್ಕೆ ಮಕ್ಕಳು, ಮಹಿಳೆಯರು, ಯುವಜನರು, ವಯಸ್ಕರು ಸಂಭ್ರಮದಿಂದ ಕುಣಿದಾಡಿದರು.