ಬೆಂಗಳೂರು ಉತ್ತರ: ಆರ್.ಎಸ್.ಎಸ್ ಭಾರತದ ತಾಲಿಬಾನ್ ಇದ್ದಂತೆ: ನಗರದಲ್ಲಿ ಬಿ.ಕೆ ಹರಿಪ್ರಸಾದ್
ಆರ್‌ಎಸ್‌ಎಸ್ ಭಾರತದ ತಾಲಿಬಾನ್ ಇದ್ದಂತೆ ಎಂದು ಕರ್ನಾಟಕ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಅವರು ಭಾನುವಾರ ಸಂಜೆ 4:30 ರ ಸುಮಾರಿಗೆ 7 ಮಿನಿಸ್ಟರ್ ಕ್ವಾಟ್ರಸ್ ನಲ್ಲಿ ತಮ್ಮ ಸೋಷಿಯಲ್ ಮೀಡಿಯಾ ಮೂಲಕ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್‌ಎಸ್‌ಎಸ್ ಹೊಗಳಿದ್ದಕ್ಕಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಹರಿ ಪ್ರಸಾದ್, ಆರ್‌ಎಸ್‌ಎಸ್ ನವರು ದೇಶದಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ನಾನು ಆರ್‌ಎಸ್‌ಎಸ್ ಅನ್ನು ತಾಲಿಬಾನ್‌ಗೆ ಹೋಲಿಸುತ್ತೇನೆ. ಅವರು ಭಾರತೀಯ ತಾಲಿಬಾನ್‌ಗಳು ಮತ್ತು ಪ್ರಧಾನಿ ಅವರನ್ನು ಕೆಂಪು ಕೋಟೆಯಿಂದ ಶ್ಲಾಘಿಸುತ್ತಿದ್ದಾರೆ” ಎಂದು ಜರಿದಿದ್ದಾರೆ.