ಹೊಸಕೋಟೆ: ತಾಲ್ಲೂಕಿನ ಖಾಜಿ ಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರ ಆಯ್ಕೆ
ಹೊಸಕೋಟೆ ಖಾಜಿಹೊಸಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಹೇಮ ಟಿವೈ ಮಂಜುನಾಥ್ ಆಯ್ಕೆ.ಹೊಸಕೋಟೆ ತಾಲ್ಲೂಕಿನಾ ಖಾಜಿಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಿಗದಿಯಾಗಿದ್ದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹೇಮ ಮಂಜುನಾಥ್ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಇಬ್ಬರು ನಾಮ ಪತ್ರ ಸಲ್ಲಿಸಿದ್ದು ಈ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹೇಮ ಮಂಜುನಾಥ್ 11 ಮತಗಳನ್ನ ಪಡೆಯುವ ಮೂಲಕ ಜಯಗಳಿಸಿದ್ದಾರೆ ಎಂದು ಚುನಾವಣೆ ಅಧಿಕಾರಿ ನಾರಾಯಣಸ್ವಾಮಿ ಘೋಷಣೆ ಮಾಡಿದ್ದಾರೆ.