ಇಂದಿನ ಯುವಪೀಳಿಗೆ ತ್ಯಾಜ್ಯ ನಿರ್ವಹಣೆಗೆ ಸೂಕ್ತ ಆಧುನಿಕ ತಂತ್ರಜ್ಞಾನಗಳನ್ನು ಆವಿಷ್ಕರಿಸುವ ಮೂಲಕ ಸುಸ್ಥಿರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಜಿ ಮುಖ್ಯ ವೈಜ್ಞಾನಿಕ ಅಧಿಕಾರಿ ಹಾಗೂ ಜಿರೋವೇಸ್ಟ್ ಮ್ಯಾನೇಜ್ಮೆಂಟ್ ಸೊಸೈಟಿ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ಡಾ ಬಾಲಗಂಗಾಧರ್ ಹೇಳಿದರು.