ಶಿವಮೊಗ್ಗ: ಭದ್ರಾವತಿಯಲ್ಲಿ ಭ್ರಷ್ಟಾಚಾರ ಎಸಗುತ್ತಿರುವ ಅಧಿಕಾರಿಗಳನ್ನು ವಜಾ ಮಾಡಿ ನಗರದಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್.ರಾಜು
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್.ರಾಜು ಅವರು, ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಹೋಬಳಿಯ ಡಿ.ಬಿ ಹಳ್ಳಿ ಗ್ರಾಮದ ಸರ್ವೆ ನಂ. 77/4ರ ಕ್ಕೆ ಸಂಬಂಧಪಟ್ಟಂತೆ ಕಂದಾಯ ಇಲಾಖೆಯಿಂದ ಸುಳ್ಳು ವಂಶವೃಕ್ಷ ಪ್ರಮಾಣ ಪತ್ರ ನೀಡಲಾಗಿದೆ. ಗ್ರಾಮದಲ್ಲಿ ಇಲ್ಲದ ವ್ಯಕ್ತಿಯನ್ನು, ಅವರು ಈ ಹಿಂದೆ ಇದ್ದರು. ಈಗ ಮೃತ ಪಟ್ಟಿದ್ದಾರೆ ಎಂದು ಸುಳ್ಳು ವರದಿ ನೀಡಲಾಗಿದೆ. ಇದರಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು. ಈ ರೀತಿ ಭದ್ರಾವತಿ ತಾಲೂಕಿನಲ್ಲಿ ಹಲವು ಘಟನೆಗಳು ನಡೆಯುತ್ತಲೆ ಇದೆ. ಖಾತೆ ಬದಲಾವಣೆ, ಪಿಂಚಣಿ ವರದಿ, ಪುನರ್‌ವಸತಿ ಸಂಬಂಸಿದಂತೆ ಅಧಿಕಾರಿಗಳು ಪರಿಶೀಲನೆಗೆ ಬಂದಾಗ ನಕಲಿ ದಾಖಲೆ ನೀಡುವ ಪದ್ದತಿ ಬಂದಿದೆ. ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.