ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ತ್ವರಿತ ವಿಲೇವಾರಿಗಾಗಿ *ಪಾಸ್ ಪೋರ್ಟ್ ಕೇಂದ್ರಗಳ ಮಾದರಿಯಲ್ಲಿ “ಸೇವಾ ಕೇಂದ್ರಗಳ" ಪ್ರಾರಂಭಿಸಲಾಗುವುದೆಂದು* ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಂಡಿರುವ ಕುರಿತು ಜಿಬಿಎ ಕೇಂದ್ರ ಕಛೇರಿಯ ಸಭಾಂಗಣದಲ್ಲಿ ಶನಿವಾರ ಸಂಜೆ 5 ಗಂಟೆ ಸುಮಾರಿಗೆ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇ-ಖಾತಾ ಪಡೆಯುವಲ್ಲಿ ನಾಗರಿಕರಿಗೆ ಯಾವುದೇ ರೀತಿಯ ಸಮಸ್ಯೆ ಆಗಬಾರದೆಂಬ ಉದ್ದೇಶದಿಂದ ಜಿಬಿಎ ಹೊಸದಾಗಿ ಪಾಸ್ ಪೋರ್ಟ್ ಕೇಂದ್ರಗಳ ಮಾದರಿಯಲ್ಲಿ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದೆಂದು ಹೇಳಿದರು.