ಬೀದರ್: ಮನ್ನಾಏಖೇಳ್ಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ನಿಮಿತ್ತ ಸೇವಾ ಪಾಕ್ಷಿಕ ಕಾರ್ಯಗಾರಕ್ಕೆ ಶಾಸಕ ಡಾ: ಶೈಲೇಂದ್ರ ಬೆಲ್ದಾಳೆ ಚಾಲನೆ
Bidar, Bidar | Sep 17, 2025 ಬೀದರ್ : ದೂರದೃಷ್ಟಿ ಮತ್ತು ದೃಢವಾದ ನಾಯಕತ್ವದಿಂದ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ದುಡಿಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇವರು ಉತ್ತಮ ಆರೋಗ್ಯ ಕೊಡಲಿ ಎಂದು ದೇವರಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದೇವೆ ಹಾಗೂ ಪಕ್ಷದ ಆದೇಶದಂತೆ ಸೇವಾ ಪಾಕ್ಷಿಕ ಅಂಗವಾಗಿ ವಿವಿಧ ಸೇವೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಹೇಳಿದರು. ದೇಶದ ಪ್ರಧಾನಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬೀದರ್ ದಕ್ಷಿಣ ಕ್ಷೇತ್ರದ ಮಂಡಲ ವತಿಯಿಂದ ಸೇವಾ ಪಾಕ್ಷಿಕ ಅಂಗವಾಗಿ ಬೀದರ್ ದಕ್ಷಿಣ ಕ್ಷೇತ್ರದ ಮನ್ನಾಏಖೇಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಆಸ್ಪತ್ರೆಯಲ್ಲಿ ಹಣ್ಣು ವಿತರಣೆ,ಮಹಾತ್ಮರ ವೃತ್ತದಲ್ಲಿ ಸ್ವಚ್ಛತೆ ಕಾರ್ಯ ಜರುಗಿತು