ರಾಯಚೂರು: ರಾಯಚೂರಲ್ಲಿ ಪಂಚ ಗ್ಯಾರಂಟಿ
ಪ್ರಚಾರದ ಕಲಾ ಜಾಥಾಕ್ಕೆ ಚಾಲನೆ
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷಿö್ಮ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆ ಕುರಿತಂತೆ ಎಲ್ಇಡಿ ವಾಹನದ ಮೂಲಕ ಕಿರುಚಿತ್ರಗಳ ಪ್ರದರ್ಶನ, ಸಂಗೀತ, ಬೀದಿ ನಾಟಕದಿಂದ ಜನಸಾಮಾನ್ಯರಿಗೆ ಮಾಹಿತಿ ಹಾಗೂ ಪ್ರಚಾರ ನೀಡಲು ಹಮ್ಮಿಕೊಂಡಿರುವ ಕಲಾ ಜಾಥಾ ಕಾರ್ಯಕ್ರಮಕ್ಕೆ ನವೆಂಬರ್ 20ರಂದು ಚಾಲನೆ ಸಿಕ್ಕಿತು. ನಗರದ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾಮಟ್ಟದ ಸಮಿತಿಯ ಉಪಾಧ್ಯಕ್ಷರಾದ ನಾಗೇಂದ್ರ ಮಟಮಾರಿ, ಹನುಮಂತಪ್ಪ ಜಾಲಿಬೆಂಚಿ ಹಾಗೂ ತಾಲೂಕುಮಟ್ಟದ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ ಅವರು ಹಸಿರು ನಿಶಾನೆ ತೋರುವ ಮೂಲಕ ಕಲಾ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು