ರಿಪೋರ್ಟರ್ಸ್ ಗಿಲ್ಡ್ನ ಬೆಳ್ಳಿ ಮಹೋತ್ಸವದ ಅಂಗವಾಗಿ ರಿಪೋರ್ಟರ್ಸ್ ಗಿಲ್ಡ್ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಪತ್ರಕರ್ತರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲಾಧಿಕಾರಿಗಳಾದ ಪೂವಿತಾ, ಎಸ್ ರವರು ಬ್ಯಾಟ್ ಬೀಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳ ನಡುವೆ ಉತ್ತಮ ಸಂವಹನ ಹಾಗೂ ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಇಂತಹ ಕ್ರೀಡಾಕೂಟಗಳು ಸಹಕಾರಿಯಾಗುತ್ತವೆ. ಕ್ರೀಡಾ ಚಟುವಟಿಕೆಗಳು ದೈಹಿಕ ಕ್ಷಮತೆ ಹಾಗೂ ಮಾನಸಿಕ ಉಲ್ಲಾಸಕ್ಕೆ ಪೂರಕವಾಗಿದ್ದು, ವೃತ್ತಿಪರ ಒತ್ತಡ ನಿವಾರಣೆಯಲ್ಲಿಯೂ ಸಹಕಾರಿಯಾಗುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತರಾದ ಬಿ. ವೆಂಕಟಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್. ಗುರುನಾಥ್, ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯ ಜಾಗಟಗಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.
Yadgir News @topfans
Yadgir, Yadgir | Sep 29, 2026