ಜಮಖಂಡಿ: ನಗರದಲ್ಲಿ ಶ್ರದ್ಧಾಭಕ್ತಿಗಳಿಂದ ಪ್ರಜಾಪ್ರಭುತ್ವ ದಿನ ಆಚರಣೆ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ತಾಲೂಕಾಡಳಿತ, ತಾಲೂಕಾ ಪಂಚಾಯತ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ, ಸಮಾಜ ಕಲ್ಯಾಣ ಇಲಾಖೆ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ,ಅಬಕಾರಿ ಇಲಾಖೆ,ಪಶುಪಾಲನೆ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಜರುಗಿತು.ಜಮಖಂಡಿ ನಗರದ ಅಂಬೇಡ್ಕರ್ ಪ್ರತಿಮೆಗೆ ತಹಶೀಲ್ದಾರ ಅನೀಲ ಬಡಿಗೇರ ಅವರ ನೇತೃತ್ವದಲ್ಲಿ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಲಾಯಿತು.ನಂತರ ಭಾರತ ಸಂವಿಧಾನದ ಪೀಠಿಕೆಯ ಪ್ರತಿಜ್ಞಾವಿಧಿ ಬೋಧಿಸಲಾಯಿತು.