ಸಿರಗುಪ್ಪ: ರೈತರು ಉತ್ಪಾದನೆಗಿಂತ ಕೃಷಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಗೆ ಒತ್ತು ನೀಡಿ ಕೊಂಚಗೇರಿ ಗ್ರಾಮದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕರೆ
ರೈತರು ಉತ್ಪಾದನೆ ಜೊತೆಗೆ, ಹೆಚ್ಚು ಲಾಭ ಗಳಿಸಲು ಕೃಷಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಗೆ ಒತ್ತು ನೀಡಬೇಕು ಎಂದು ಭಾರತ ಸರ್ಕಾರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಹೇಳಿದರು. ಗುರುವಾರ,ಸಂಜೆ 4:30ಕ್ಕೆ ಸಿರುಗುಪ್ಪ ತಾಲ್ಲೂಕಿನ ಕೊಂಚಗೇರಿ ಗ್ರಾಮದಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ ವತಿಯಿಂದ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ (ಎಂಪಿಎಲ್ ಎಡಿಎಸ್) ಯಡಿ ರೂ.2.54 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಕೃಷಿ ಸಂಸ್ಕರಣೆಗಾಗಿ ರೈತರಿಗೆ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಕೇಂದ್ರ ಹಣಕಾಸು ಸಚಿವೆಯಾದ ಬಳಿಕ, ಪ್ರತಿಬಾರಿ ಬಜೆಟ್ ಮಂಡನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ರೈತ