ಬೆಂಗಳೂರು ಉತ್ತರ: ಮುಖ್ಯಮಂತ್ರಿ ಸಿದ್ದರಾಮಯ್ಯ: ದಾಸಶ್ರೇಷ್ಠ ಕನಕದಾಸರ ಜಯಂತಿಗೆ ಪುಷ್ಪನಮನ
ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೆಂಗಳೂರಿನ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು. ಕನಕದಾಸರ ಬದುಕು ಮತ್ತು ಬೋಧನೆಗಳು ಮನುಕುಲದ ಹಾದಿಗೆ ಬೆಳಕಾಗಲಿ ಎಂದು ಅವರು ಮುಖ್ಯಮಂತ್ರಿ ಅವರು ಹಾರೈಸಿದರು.