ಕುರುಗೊಡು: ದಮ್ಮೂರು ಗ್ರಾಮದ ಎಸ್ಸಿ ಕಾಲೋನಿಯಲ್ಲಿ ಸಿಸಿರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಗಣೇಶ್ ಭೂಮಿ ಪೂಜೆ
ನ.12,ಬುಧವಾರ ಮಧ್ಯಾಹ್ನ 3 ಗಂಟೆಗೆ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದ ಎಸ್ಸಿ ಕಾಲೋನಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಗಣೇಶ್ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಕಾಮಗಾರಿ ಸುಮಾರು ₹50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದ್ದು, ಗ್ರಾಮಸ್ಥರ ಹಳೆಯ ಬೇಡಿಕೆ ಇಂದಿನ ಯೋಜನೆಯ ಮೂಲಕ ಈಡೇರಲಿದೆ ಎಂದು ಶಾಸಕರು ಹೇಳಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ಸ್ಥಳೀಯ ನಾಯಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.