ಕೊಪ್ಪಳ: ಸಮೀಕ್ಷೆಯಲ್ಲಿ ಪಂಚಮಸಾಲಿ ಸಮಾಜದವರು ಧರ್ಮದ ಕಾಲಂನಲ್ಲಿ ಹಿಂದು ,ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ನಮೋದಿಸಿ; ನಗರದಲ್ಲಿ ವಚನಾನಂದ ಸ್ವಾಮಿಜಿ
Koppal, Koppal | Sep 21, 2025 ಹಿಂದುಳಿದ ವರ್ಗಗಳ ಇಲಾಖೆಯಿಂದ ನಡೆಯುವ ಸಮೀಕ್ಷೆ ಯಲ್ಲಿ ಪಂಚಮಸಾಲಿ ಸಮಾಜದವರು ಧರ್ಮದ ಕಾಲಂ ನಲ್ಲಿ ಹಿಂದು ಎಂದು ಮತ್ತು ಜಾತಿ ಕಾಲಂ ನಲ್ಲಿ ಲಿಂಗಾಯತ ಪಂಚಮಸಾಲಿ ಎಂದು ಬರೆಸಬೇಕು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಹರಿಹರ ಪೀಠದ ಸ್ವಾಮಿಜಿ ವಚನಾನಂದ ಶ್ರೀಗಳು ಸಮಾಜ ಬಾಂದವರಲ್ಲಿ ಮನವಿ ಮಾಡಿದ್ದಾರೆ. ಸೆಪ್ಟೆಂಬರ್ 21 ರಂದು ಮಧ್ಯಾಹ್ನ 3-00 ಗಂಟೆಗೆ ಕೊಪ್ಪಳ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಿ ಮಾಧ್ಯಮಕ್ಕೆ ಮಾತನಾಡಿ ಹೇಳಿದ್ದಾರೆ ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಾಮಜದ ರಾಜ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರು ಮತ್ತು ಸಮಾಜದ ಮುಖಂಡರು ಉಪಸ್ಥಿತರಿದ್ದರು