ಕಲಬುರಗಿ: ಪಾಲಿಕೆಯ ಜೋನಲ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ: ನಗರದಲ್ಲಿ ಸಾಮಾಜಿಕ ಕಾರ್ಯಕರ್ತ ಹರುಣ್ ಖತೀಬ್
ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಆಸ್ತಿ ದಾಖಲೆ ತಿದ್ದುಪಡಿ ಮಾಡಲು ಸಾರ್ವಜನಿಕರಿಂದ ಲಂಚ ಬೇಡಿಕೆ ಇಡಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಹರುಣ್ ಖತೀಬ್ ಗಂಭೀರ ಆರೋಪ ಮಾಡಿದ್ದಾರೆ. ಬಿ ಖಾತಾ, ಈ ಖಾತಾ ದಾಖಲೆ ತಿದ್ದುಪಡಿ ಸೇರಿದಂತೆ ಪ್ರತಿ ಕೆಲಸಕ್ಕೂ ಅಧಿಕಾರಿಗಳು ₹20 ಸಾವಿರದವರೆಗೆ ಲಂಚ ಕೇಳುತ್ತಿದ್ದಾರೆ ಎಂದು ಅವರು ದೂರಿದರು. ಜೋನಲ್ ಅಧಿಕಾರಿ ವಿಶಾಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, ಕ್ರಮ ಕೈಗೊಳ್ಳದಿದ್ದರೆ ಪಾಲಿಕೆ ಎದುರು ಧರಣಿ ಸತ್ಯಾಗ್ರಹಕ್ಕೆ ಇಳಿಯುವುದಾಗಿ ಶುಕ್ರವಾರ ನಾಲ್ಕು ಗಂಟೆಗೆ ಮಾತನಾಡಿ ಎಚ್ಚರಿಕೆ ನೀಡಿದರು.